ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗದಲ್ಲಿ ಮೋದಿ ಫೋಟೋಗೆ ಈರುಳ್ಳಿ ಹಾರ, ಹೊಸದುರ್ಗದಲ್ಲಿ ಈರುಳ್ಳಿ ಸುರಿದು ವಿಭಿನ್ನ ಪ್ರತಿಭಟನೆ.

ಚಿತ್ರದುರ್ಗ : ಇಂದು ದೇಶವ್ಯಾಪ್ತಿ ನಡೆಯುತ್ತಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆ, ಕನ್ನಡಪರ ಸಂಘಟನೆ ಹಾಗೂ ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಕೋಟೆನಾಡು ಚಿತ್ರದುರ್ಗದಲ್ಲಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾಕಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹುಚ್ಚವನಹಳ್ಳಿ ಮಂಜುನಾಥ್ ಬಣದಿಂದ ನಗರದ ಗಾಂಧಿ ವೃತ್ತದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷರಾದ ಲಕ್ಷ್ಮಿಕಾಂತ್ ನೇತೃತ್ವದಲ್ಲಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ಆಕ್ರೋಶವ್ಯಕ್ತಪಡಿಸಿದರು. ಇದಲ್ಲದೆ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಮುಂದಾಗಿರುವ ಘಟನೆ ನಡೆಯಿತು.

ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಲ್ಲಿ ರೈತರು ಈರುಳ್ಳಿಯನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ಈರುಳ್ಳಿ ಬೆಲೆ ಕುಸಿತ ಹಿನ್ನೆಲೆಯಲ್ಲಿ ರೈತರಿಗೆ ಸಾಕಷ್ಟು ನಷ್ಟ ಉಂಟಾಗಿದ್ದು ಈರುಳ್ಳಿ ಬೆಳೆದ ರೈತರು ಕಂಗಾಲಾಗಿದ್ದಾರೆ ಈ ಹಿನ್ನೆಲೆಯಲ್ಲಿ ಈರುಳ್ಳಿಗಳನ್ನು ರಸ್ತೆಗೆ ಸುರಿದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಜಿಲ್ಲೆಯಲ್ಲಿ ಅಂಗಡಿ-ಮುಂಗಟ್ಟುಗಳು ಕೆಲಕಾಲ ಸ್ವಯಂಪ್ರೇರಿತವಾಗಿ ಮುಚ್ಚಿ ನಂತರ ಎಂದಿನಂತೆ ವಾಹಿವಾಟು ನಡೆಸಿದರು. ಭಾರತ್ ಬಂದ್ ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಗಳು ರೈತಪರ ಸಂಘಟನೆಗಳು ಕಾರ್ಮಿಕ ಸಂಘಟನೆಗಳು ಸೇರಿದಂತೆ ಮತ್ತಿತರ ಸಂಘಟನೆಗಳು ಭಾಗವಹಿಸಿದ್ದವು. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Edited By : Manjunath H D
PublicNext

PublicNext

27/09/2021 12:26 pm

Cinque Terre

54.96 K

Cinque Terre

5

ಸಂಬಂಧಿತ ಸುದ್ದಿ