ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳ ನೇಮಕ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಡಿ.ಕೆ ಶಿವಕುಮಾರ್ ಅವರನ್ನು ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದೆ. ಕೆಪಿಸಿಸಿ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್, ಓಬಿಸಿ, ಅಲ್ಪಸಂಖ್ಯಾತ ಘಟಕದಂತಹ ಮುಂಚೂಣಿ ಘಟಕಗಳ ಅಧ್ಯಕ್ಷರ ನೇಮಕ ಹಾಗೂ ಸುಮಾರು 15 ಜಿಲ್ಲಾಧ್ಯಕ್ಷರ ಬದಲಾವಣೆ ವಿಚಾರವಾಗಿ ಚರ್ಚೆಯಾಗುವ ಸಾಧ್ಯತೆ ಇದೆ.
ಶಿವಕುಮಾರ್ ಅವರ ಆಪ್ತರ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ಅಧ್ಯಕ್ಷರು ದೆಹಲಿಯಲ್ಲೇ ಬೀಡು ಬಿಡಲಿದ್ದು, ಹೈಕಮಾಂಡ್‌ನ ವರಿಷ್ಠರಾದ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರೊಂದಿಗೆ ಪದಾಧಿಕಾರಿಗಳ ಪಟ್ಟಿ ಬಗ್ಗೆ ಚರ್ಚಿಸಲಿದ್ದಾರೆ. ಯಾವುದೇ ಸಮಸ್ಯೆ ಎದುರಾಗದಿದ್ದರೆ ಮುಂದಿನ ಒಂದು ವಾರದೊಳಗೆ ಕೆಪಿಸಿಸಿಗೆ ನೂತನ ಪದಾಧಿಕಾರಿಗಳ ನೇಮಕವಾಗಲಿದೆ. ಎಂಬ ವಿಚಾರದ ಬಗ್ಗೆಯೂ ಹೈಕಮಾಂಡ್‌ನೊಂದಿಗೆ ಚರ್ಚಿಸಲಿದ್ದಾರೆ.
ಈ ಎಲ್ಲಾ ಬೆಳವಣಿಗೆ ಬಗ್ಗೆ ಮಾತನಾಡಲು ಶಿವಕುಮಾರ್ ಅವರು ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಸಮಯವನ್ನು ಕೋರಿದ್ದು, ಪ್ರವಾಸದಲ್ಲಿರುವ ಈ ನಾಯಕರು ಲಭ್ಯರಾದರೆ ಅವರೊಂದಿಗೆ ಮಾತುಕತೆ ನಡೆಸಿ ನಂತರ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
PublicNext
27/09/2021 12:34 pm