ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ ಬಂದ್ ಯಶಸ್ವಿಯಾಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೇಂದ್ರದಲ್ಲಿ ನರೇಂದ್ರ ಮೋದಿಯವರ ಹಾಗೂ ಅಮಿತ್ ಷಾ ಅವರ ನೇತೃತ್ವದಲ್ಲಿ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ. ರೈತರಿಗೂ ಗೊತ್ತಿದೆ ಈ ಎಲ್ಲ ಕಾಯಿದೆಯಿಂದ ರೈತ ಸಮುದಾಯಕ್ಕೆ ಲಾಭ ಆಗುತ್ತದೆ ಎಂದು ಈ ನಿಟ್ಟಿನಲ್ಲಿ ರೈತರು ಭಾರತ ಬಂದ್ ಗೆ ಬೆಂಬಲ ನೀಡುವುದಿಲ್ಲ ಎಂದು ಅವರು ಹೇಳಿದರು.
ಇನ್ನೂ ಆನ್ ಲೈನ್ ಜೂಜಾಟದ ಬಗ್ಗೆ ಮಾತನಾಡಿದ ಅವರು ಈಗಾಗಲೇ ಎಲ್ಲ ರೀತಿಯ ಆನ್ ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೊಲೀಸ್ ಇತಿಹಾಸದಲ್ಲಿಯೇ ಇಂತಹೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಯಾವುದೇ ಆನ್ ಲೈನ್ ಜೂಜಾಟದ ವೇದಿಕೆಗಳಿದ್ದರೂ ಅವುಗಳನ್ನು ಬ್ಯಾನ್ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದೆ.
ಪೊಲೀಸ್ ಇಲಾಖೆ ವರ್ಗಾವಣೆಯನ್ನು ಜಿಲ್ಲಾ ಮಟ್ಟಕ್ಕೆ ತರುವ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ನೀಡುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
PublicNext
27/09/2021 01:19 pm