ಬೆಂಗಳೂರು: ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ.
2023ಕ್ಕೆ ಜಾತ್ಯತೀತ ಜನತಾದಳದ ಹಾಗೂ ಎಚ್.ಡಿ. ಕುಮಾರಸ್ವಾಮಿ ನಾಯಕತ್ವದ ಸರಕಾರ ರಚನೆ ಮಾಡುವ ಗುರಿಯೊಂದಿಗೆ ರಾಮನಗರ ಜಿಲ್ಲೆ ಬಿಡದಿ ಬಳಿಯ ಕೇತುಗಾನಹಳ್ಳಿ ಫಾರ್ಮ್‌ಹೌಸ್‌ನಲ್ಲಿ ಆರಂಭವಾದ 4 ದಿನಗಳ 'ಜನತಾ ಪರ್ವ 1.0' ಕಾರ್ಯಗಾರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
"ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ. ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ? ಎಂಬುದನ್ನು ಅರಿತು ಮಾತನಾಡಬೇಕು. ಅವರ ಜತೆ, ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರ್ಯಾರು ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ, ದೇಶಕ್ಕೆ ಗೊತ್ತಿದೆ," ಎಂದು ಮಾರ್ಮಿಕವಾಗಿ ನುಡಿದರು.
PublicNext
27/09/2021 04:07 pm