ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ : ಒತ್ತಾಯದಿಂದ ಅಂಗಡಿ ಬಂದ್ ಮಾಡಿಸಿದ ಸಂಘಟನೆಗಳು

ಗದಗ: ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಇಂದು ಕರೆ ನೀಡಲಾಗಿದ್ದ ಭಾರತ್ ಬಂದ್ ಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗದಗದಲ್ಲಿಯೂ ಬಂದ್ ಗೆ ಉತ್ತಮ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಕೆಲ ಸಂಘಟನೆಗಳು ಒತ್ತಾಯ ಪೂರ್ವಕವಾಗಿ ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ.

ಪೊಲೀಸರ ಸಮ್ಮುಖದಲ್ಲಿ ಬಂದ್ ಗೆ ಮುಂದಾದ ರೈತ ಸಂಘ ಹಾಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಅಂಗಡಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ. ಅಷ್ಟೆಅಲ್ಲದೆ ಅಂಗಡಿ ಓಪನ್ ಮಾಡಿದ್ರೆ ಕಲ್ಲು ಹೊಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಗದಗ ನಗರದ ಹುಯಿಲಗೋಳ ನಾರಾಯಣರಾವ್ ವೃತ್ತದಲ್ಲಿ ಪ್ರತಿಭಟನೆ ನಡೆಯುತ್ತಿರುವಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಕೂಡಾ ನಡೆಯಿತು.

Edited By : Manjunath H D
PublicNext

PublicNext

27/09/2021 04:22 pm

Cinque Terre

72.65 K

Cinque Terre

1

ಸಂಬಂಧಿತ ಸುದ್ದಿ