ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪಚುನಾವಣೆ ಪ್ರಚಾರದಲ್ಲಿ ಗಲಾಟೆ: ರಿವಾಲ್ವರ್ ಹಿಡಿದ ದಿಲೀಪ್ ಘೋಷ್ ಭದ್ರತಾ ಸಿಬ್ಬಂದಿ.!

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಧ್ಯೆ ಬಿಕ್ಕಟ್ಟು ಮತ್ತಷ್ಟು ಹೆಚ್ಚಾಗುತ್ತಿದೆ. ಬಿಜೆಪಿ ಸಂಸದ ದಿಲೀಪ್ ಘೋಷ್ ರಕ್ಷಣೆಗಾಗಿ ಅವರ ಭದ್ರತಾ ಸಿಬ್ಬಂದಿ ರಿವಾಲ್ವರ್ ತೋರಿಸಿ ಸಂಸದರನ್ನು ರಕ್ಷಣೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೌದು. ಭವಾನಿಪುರ ವಿಧಾನಸಭೆಗೆ ಉಪಚುನಾವಣೆಯಲ್ಲಿ ಟಿಎಂಸಿಯಿಂದ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಬಿಜೆಪಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಕಣಕ್ಕಿಳಿಸಿದೆ. ಪ್ರಿಯಾಂಕಾ ಪರವಾಗಿ ಪ್ರಚಾರ ಮಾಡಲು ದಿಲೀಪ್ ಘೋಷ್ ಭವಾನಿಪುರಕ್ಕೆ ಬಂದಿದ್ದರು. ಈ ಸಮಯದಲ್ಲಿ ಟಿಎಂಸಿ ಕಾರ್ಯಕರ್ತರು ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಪ್ರೇಕ್ಷಕರು ಕೋಪಗೊಳ್ಳುವುದನ್ನು ನೋಡಿ ಘೋಷ್ ಭದ್ರತಾ ಸಿಬ್ಬಂದಿ ರಿವಾಲ್ವರ್ ತೋರಿಸಿ, ಬಳಿಕ ಅವರನ್ನು ಸುರಕ್ಷಿತವಾಗಿ ಅಲ್ಲಿಂದ ಸ್ಥಳಾಂತರಿಸಿದ್ದಾರೆ.

ಸೆಪ್ಟೆಂಬರ್ 30ರಂದು ಭವಾನಿಪುರದಲ್ಲಿ ಮತದಾನ ನಡೆಯಲಿದೆ ಎಂಬುವುದು ಉಲ್ಲೇಖನೀಯ. ಇನ್ನು ಇಂದು, ಸೋಮವಾರ ಚುನಾವಣಾ ಪ್ರಚಾರ ನಡೆಸಲು ಕೊನೆಯ ದಿನವಾಗಿದೆ. ಈ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಗೆಲುವು ಬಹಳ ಮುಖ್ಯವಾಗಿದೆ. ದೀದಿ ಅವರು ಒಂದು ವೇಳೆ ಸೋತರೆ ಮುಖ್ಯಮಂತ್ರಿ ಸ್ಥಾನವನ್ನು ತೊರೆಯಬೇಕಾಗುತ್ತದೆ.

Edited By : Vijay Kumar
PublicNext

PublicNext

27/09/2021 06:28 pm

Cinque Terre

216.72 K

Cinque Terre

5

ಸಂಬಂಧಿತ ಸುದ್ದಿ