ಬಾಗಲಕೋಟೆ: ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಆಗ ನಾನೇ ಸಿಎಂ ಎಂದು ಮಾಜಿ ಸಿಎಂ ಹಾಗೂ ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಜಕನೂರು ಗ್ರಾಮದಲ್ಲಿ ನಡೆದ ಸಿದ್ದಶ್ರೀ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದ ಸಿದ್ದರಾಮಯ್ಯ, ಮತ್ತೊಮ್ಮೆ ಬಡವರಿಗೆ ಆಸರೆಯಾಗುವ ಮೂಲಕ ಉತ್ತಮ ಆಡಳಿತ ನೀಡುತ್ತೇನೆ ಎಂದಿದ್ದಾರೆ.
ಈ ಹೇಳಿಕೆಯಿಂದ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಯಾಗಲು ಬಯಸುತ್ತಿರುವ ಇತರೆ ನಾಯಕರಿಗೆ ಸಿದ್ದರಾಮಯ್ಯ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಹಿಂದಿನ ಅಧಿಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೆ ಮುಂದುವರೆಯಲಿದೆ. ಯಾರು ಕೂಡ ಸಮಾಜದಲ್ಲಿ ಹಸಿವಿನಿಂದ ಬಳಲಬಾರದು ಎಂಬ ನಿರ್ಧಾರ ಮಾಡಿ, ಪ್ರತಿಯೊಬ್ಬರಿಗೂ ಅನ್ನ ಸಿಗುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ ಆದರೂ ಯೋಜನೆ ವಿರುದ್ಧ ಹಲವರು ಕುಹಕ, ಮತ್ತು ವ್ಯಂಗ್ಯವಾಗಿ ಮಾತನಾಡಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.
PublicNext
28/09/2021 07:38 am