ಚಂಡೀಗಢ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ (ಪಿಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ನವಜೋತ್ ಸಿಂಗ್ ಸಿಧು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರ ಬರೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಪಕ್ಷದಲ್ಲಿ ಮುಂದುವರಿಯುವುದಾಗಿ ಹೇಳಿದ್ದಾರೆ.
ಪತ್ರದಲ್ಲಿ ಏನಿದೆ?:
"ಕೆಲವು ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಮನುಷ್ಯನ ಸ್ವಭಾವದ ಕುಸಿತವು ಆರಂಭವಾಗುತ್ತದೆ. ಪಂಜಾಬ್‌ನ ಭವಿಷ್ಯ ಮತ್ತು ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವೆ. ನಾನು ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ" ಎಂದು ನವಜೋತ್ ಸಿಧು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಪಂಜಾಬ್ ಕಾಂಗ್ರೆಸ್‌ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಳೆದ ಜುಲೈನಲ್ಲಿ ಸಿಧು ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿತ್ತು. ಬಳಿಕ ನಡೆದ ಬೆಳವಣಿಗೆಯಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯದ ಬೆಳವಣಿಗೆ ಪ್ರಕಾರ ಅವರು ಬಿಜೆಪಿ ಕಡೆಗೆ ಒಲವು ತೋರುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
PublicNext
28/09/2021 03:45 pm