ಧಾರವಾಡ: ಇತ್ತೀಚೆಗೆ ಕ್ರಿಶ್ಚಿಯನ್ ಮತಾಂತರದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸರ್ಕಾರ ಕಾನೂನು ಜಾರಿಗೆ ತರಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಆಗ್ರಹಿಸಿದರು.
ಧಾರವಾಡದಲ್ಲಿ ಮಾತನಾಡಿರುವ ಅವರು, ವಿಧಾನಸಭೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಅವರೇ ಕ್ರಿಶ್ಚಿಯನ್ ಮತಾಂತರದ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರು ಬ್ಯಾಡರ ಹಳ್ಳಿಯಲ್ಲಿ ಆರ್‌ಎಸ್‌ಎಸ್‌ನವರು ಮತಾಂತರ ಪ್ರಕರಣವನ್ನು ಬೆಳಕಿಗೆ ತಂದಿದ್ದಾರೆ. ಪೊಲೀಸ್ ಇಲಾಖೆ ಅಲ್ಲಿ ಕೆಲವರನ್ನು ಬಂಧನ ಕೂಡ ಮಾಡಿದೆ ಎಂದಿದ್ದಾರೆ.
ಈ ಬಗ್ಗೆ ರಾಜ್ಯ ಸರ್ಕಾರ ಕೇವಲ ಕಾನೂನು ಜಾರಿಗೆ ತರುವುದು ಮಾತ್ರವಲ್ಲ. ಮತಾಂತರವನ್ನು ತಡೆಗಟ್ಟಬೇಕು. ಈಗ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಆದರೆ, ಇಂದಿಗೂ ಗೋವುಗಳ ಕಳ್ಳತನ ಹಾಗೂ ಹತ್ಯೆ ನಡೆಯುತ್ತಲೇ ಇದೆ. ಬ್ರಿಟೀಷರ ಕಾಲದಿಂದಲೂ ಮತಾಂತರ ನಡೆದಿದೆ. ಇದನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಮುತಾಲಿಕ್ ಆಗ್ರಹಿಸಿದ್ದಾರೆ.
PublicNext
28/09/2021 04:11 pm