ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ ಕೃಷಿ ಸಚಿವ ಸ್ಥಾನ ಸಿಗಲಿದೆ ಎಂಬ ಮಾತುಗಳು ಕೇಳಿ ಬಂದಿವೆ.
ದೆಹಲಿ ಪ್ರವಾಸ ಕೈಗೊಂಡಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಆದರೆ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ಸಿಂಗ್ ಅವರು ವೈಯಕ್ತಿಕ ಭೇಟಿಗೆ ದೆಹಲಿಗೆ ಹೋಗಿದ್ದಾರಷ್ಟೇ. ಇದರಲ್ಲಿ ರಾಜಕೀಯವೇನೂ ಇಲ್ಲ. ಅಲ್ಲಿ ಅವರು ತಮ್ಮ ಸ್ನೇಹಿತರನ್ನು ಭೇಟಿ ಮಾಡಲಾಗಿದ್ದಾರೆ ಎಂದಿದ್ದಾರೆ.
PublicNext
28/09/2021 09:02 pm