ಚಂಡೀಗಢ: ಇನ್ನೇನು ಪಂಜಾಬ್‌ನಲ್ಲಿ ವಿಧಾನ ಸಭೆ ಚುನಾವಣೆ ಹತ್ತಿರ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಲಯದಲ್ಲಿ ಮಹತ್ತರ ರಾಜಕೀಯ ಬದಲಾವಣೆಗಳು ಘಟಿಸುತ್ತಿವೆ. ಪಂಜಾಬ್ ಕಾಂಗ್ರೆಸ್ ರಾಜ್ಯಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಮತ್ತೆ ನಾಲ್ವರು ನಾಯಕರು ರಾಜೀನಾಮೆ ನೀಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ರಜಿಯಾ ಸುಲ್ತಾನಾ, ಶಾಸಕ ಪರ್ಗತ್ ಸಿಂಗ್, ಪಂಜಾಬ್ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಗೌತಮ್ ಸೇಠ್ (ತರಬೇತಿ ಮೇಲ್ವಿಚಾರಣೆ), ಖಜಾಂಚಿ ಗುಲ್ಜರ್ ಇಂದರ್ ಚಾಹಲ್ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಿಧು ಅವರೊಂದಿಗೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಸಿಧು ಅವರ ರಾಜೀನಾಮೆಯನ್ನು ಕಾಂಗ್ರೆಸ್ ವರಿಷ್ಠರು ಸ್ವೀಕರಿಸಿಲ್ಲ. ರಾಜ್ಯದ ಮಟ್ಟದಲ್ಲಿಯೇ ವಿಚಾರ ಬಗೆಹರಿಸಿಕೊಳ್ಳುವಂತೆ ವರಿಷ್ಠರು ಪಕ್ಷದ ಮುಖಂಡರಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ.
PublicNext
29/09/2021 10:07 am