ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಣ್ಣೆನಗರಿಗೆ ಸಿದ್ದರಾಮಯ್ಯ ಯಾಕೆ ಬರಲಿಲ್ಲ...?

ದಾವಣಗೆರೆ: ಬೆಣ್ಣೆನಗರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಾರೆ ಎಂದುಕೊಂಡಿದ್ದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ನಿರಾಸೆ ತಂದಿದೆ. ಹವಾಮಾನ ವೈಪರೀತ್ಯ ಕಾರಣ ಹೆಲಿಕ್ಯಾಪ್ಟರ್ ನಲ್ಲಿ ಆಗಮಿಸಲು ಸಾಧ್ಯವಾಗದ ಕಾರಣ ಸಿದ್ದರಾಮಯ್ಯನವರ ದಾವಣಗೆರೆ ಪ್ರವಾಸ ರದ್ದುಗೊಂಡಿದೆ.

ಕಾಂಗ್ರೆಸ್ ವತಿಯಿಂದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿಯಲ್ಲಿ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ಜಿಲ್ಲಾ ಒಕ್ಕೂಟಗಳ ನೇತೃತ್ವದಲ್ಲಿ ಹೆಚ್. ಕಾಂತರಾಜು ನೇತೃತ್ವದಲ್ಲಿ ನಡೆದಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಬಿಡುಗಡೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಈ ಎರಡೂ ಪ್ರತಿಭಟನೆಯ ಕೇಂದ್ರ ಬಿಂದುವಾಗಿದ್ದವರೇ

ಸಿದ್ದರಾಮಯ್ಯ. ಅವರು ಆಗಮಿಸದ ಹಿನ್ನೆಲೆಯಲ್ಲಿ ಸೇರಿದ್ದ ಜನಸ್ತೋಮವೂ ಕಡಿಮೆ ಆಗಿತ್ತು. ನಗರದೆಲ್ಲೆಡೆ ಸಿದ್ದರಾಮಯ್ಯ ಬರುತ್ತಾರೆ ಎಂದು ಬಂಟಿಂಗ್ಸ್, ಬ್ಯಾನರ್, ಕಟೌಟ್ ಗಳನ್ನ ಹಾಕಲಾಗಿತ್ತು. ಸಿದ್ದರಾಮಯ್ಯನವರ

ಪ್ರವಾಸ ರದ್ದಾಗಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಹೆಚ್ಚಾಗಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಸುಳಿಯಲೇ ಇಲ್ಲ.

ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು, ಸಿದ್ದರಾಮಯ್ಯನವರು ಬಂದಿದ್ದರೆ ಚೆನ್ನಾಗಿತ್ತು. ಆದ್ರೆ ಹವಾಮಾನ ವೈಪರೀತ್ಯ ಕಾರಣದಿಂದ ಬರಲು ಆಗಿಲ್ಲ. ಹಿರಿಯೂರಿನಲ್ಲಿ ಜಾಸ್ತಿ ಮಳೆ ಇದ್ದ ಕಾರಣ ಹೆಲಿಕ್ಯಾಪ್ಟರ್ ನಲ್ಲಿ ಬರಲು ಆಗಿಲ್ಲ. ನಾವೆಲ್ಲರೂ ಸೇರಿ ಕೇಂದ್ರ ಸರ್ಕಾರದ ಜನ ವಿರೋಧಿ, ರೈತ ವಿರೋಧಿ ನೀತಿ ಖಂಡಿಸೋಣ ಎಂದರು.

Edited By : Nagesh Gaonkar
PublicNext

PublicNext

29/09/2021 04:01 pm

Cinque Terre

46.39 K

Cinque Terre

0