ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಸರಾ ಉದ್ಘಾಟನೆಗೆ ಆಹ್ವಾನ : ಪತ್ರ ಬರೆದ ಎಸ್.ಎಂ ಕೃಷ್ಣ

ಮಂಡ್ಯ: ಮೈಸೂರು ದಸರಾ ಉದ್ಘಾಟನೆಗೆ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಆದೇಶ ಹೊರಡಿಸಿದ್ದರು. ಈ ಸಂಭ್ರಮದ ವಿಚಾರಕ್ಕೆ ಎಸ್.ಎಂ. ಕೃಷ್ಣ ಪತ್ರದ ಮುಖೇನ ಪ್ರತಿಕ್ರಿಯೆ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ, ಮಂತ್ರಿಮಂಡಲಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಹಾಗೂ ನಾಡಿಗೆ ಒಳಿತಾಗಲಿ ಎಂದು ಶುಭಕೋರಿದ್ದಾರೆ.

ಈ ವರ್ಷದ ವಿಶ್ವವಿಖ್ಯಾತ ಮೈಸೂರಿನ ದಸರಾ ಉದ್ಘಾಟನೆಗೆ ನನ್ನನ್ನು ಆಮಂತ್ರಿಸಿರುವ ನಿಮ್ಮ ಹಾಗೂ ನಿಮ್ಮ ಮಂತ್ರಿ ಮಂಡಲದ ಎಲ್ಲರಿಗೂ ನನ್ನ ಧನ್ಯವಾದಗಳು. ಯದುವಂಶದ ಮಹಾರಾಜರುಗಳು ನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ ಪಸರಿಸಲು ಆ ಮೂಲಕ ನಾಡಿನ ಹಿರಿಮೆಯನ್ನು ಎತ್ತಿ ಹಿಡಿಯಲು ಪ್ರಾರಂಭಿಸಿದ ದಸರಾ ಸರಿಸುಮಾರು 400 ವರ್ಷಗಳನ್ನು ಕಳೆದರೂ ತನ್ನ ವೈಭವವನ್ನು ಕಳೆದುಕೊಂಡಿಲ್ಲ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರ ದೃಷ್ಟಿಯಿಂದ ಪ್ರತಿಷ್ಠಾನಗೊಂಡ ರೈತಾಪಿ ವರ್ಗವೆ ಅಧಿಕವಾಗಿರುವ ಮಂಡ್ಯ ಜಿಲ್ಲೆಯಿಂದ ಬಂದ ನಾನು ಈ ಬಾರಿ ದಸರಾ ಉದ್ಘಾಟಿಸುತ್ತಿರುವುದು ನನ್ನ ಬಾಳಿನ ಸುದೈವ. ತಾಯಿ ಚಾಮುಂಡೇಶ್ವರಿ ಮನುಕುಲಕ್ಕೆ ಬಂದಿರುವ ಕೊರೊನಾ ಮಹಾಮಾರಿಯಿಂದ ಮುಕ್ತಿಗೊಳಿಸಿ ನಾಡು ತಮ್ಮ ನೇತೃತ್ವದಲ್ಲಿ ಮತ್ತೆ ಅಭಿವೃದ್ಧಿಯೆಡೆಗೆ ಮುನ್ನಡೆಯಲಿ ಎಂದು ಆಶಿಸುತ್ತೇನೆ ಎಂದು ಶುಭಹಾರೈಸಿದ್ದಾರೆ.

Edited By : Nirmala Aralikatti
PublicNext

PublicNext

29/09/2021 07:07 pm

Cinque Terre

36.36 K

Cinque Terre

2

ಸಂಬಂಧಿತ ಸುದ್ದಿ