ಕೋಲ್ಕತ್ತಾ : ತೀವ್ರ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಣದಲ್ಲಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ಇಂದು ಶುರುವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಮಮತಾ, ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋತಿದ್ದರು. ಈ ಹಿನ್ನೆಲೆಯಲ್ಲಿ ಅವರು ಇದೀಗ ಉಪ ಚುನಾವಣೆ ಮೂಲಕ ವಿಧಾನಸಭೆ ಪ್ರವೇಶ ಬಯಸಿದ್ದಾರೆ.
ಇಲ್ಲಿ ಅವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ವಕೀಲೆ ಪ್ರಿಯಾಂಕಾ ಟಿಬ್ರೆವಾಲ್ , ಸಿಪಿಎಂನಿಂದ ಶ್ರೀಬಿಜ್ ಬಿಸ್ವಾಸ್ ಸ್ಪರ್ಧಿಸಿದ್ದಾರೆ. ಪ್ರಚಾರದ ವೇಳೆ ಇಲ್ಲಿ ಭಾರಿ ಹಿಂಸಾಚಾರದ ಕಾರಣ ಗುರುವಾರದ ಮತದಾನಕ್ಕೆ ಬಂದೋಬಸ್ತ್ ಮಾಡಲಾಗಿದೆ. ನಿಗದಿತ ವೇಳಾಪಟ್ಟಿಯಂತೆಯೇ ಭವಾನಿಪುರ ಉಪ ಚುನಾವಣೆ ನಡೆಯಲಿದೆ ಎಂದು ಹೇಳಿರುವ ಕೋಲ್ಕತಾ ಹೈಕೋರ್ಟ್ ಈ ಸಂಬಂಧ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಲಾಗಿತ್ತು.
ಭವಾನಿಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ವಕೀಲೆ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ಎದುರು ಅಲ್ಪಮತಗಳ ಅಂತರದಿಂದ ಸೋತಿದ್ದ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಹುದ್ದೆ ಉಳಿಸಿಕೊಳ್ಳಲು ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಅಗತ್ಯವಾಗಿದೆ. ಅಕ್ಟೋಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ.
PublicNext
30/09/2021 08:20 am