ಬೆಂಗಳೂರು: ಡಿ.ಎನ್.ಜೀವರಾಜ್ ಹಾಗೂ ಎಂ.ಪಿ.ರೇಣುಕಾಚಾರ್ಯರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ. ಡಿ.ಎನ್.ಜೀವರಾಜ್. ಮಾಜಿ ಸಚಿವರಾಗಿದ್ದವರು ಹಾಗೂ ಎಂ.ಪಿ.ರೇಣುಕಾಚಾರ್ಯ. ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.
ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ ಡಿ.ಎನ್.ಜೀವರಾಜ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿರುವ ಕರ್ನಾಟಕ ಸರ್ಕಾರದ ಸಚಿವಾಲಯ, ತಕ್ಷಣದಿಂದ ಆದೇಶ ಜಾರಿಗೆ ಬರುವಂತೆ ಸೂಚನೆ ನೀಡಿದೆ. ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆಯ ಸಚಿವರಿಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನ ನೀಡಿ ಆದೇಶಿಸಲಾಗಿದೆ.
PublicNext
30/09/2021 10:09 am