ಹಾವೇರಿ: ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ನಿಯಾಜ್ ಶೇಖ್ ಅವರನ್ನು ಜೆಡಿಎಸ್ ಘೋಷಿಸಿದೆ.
ಈ ಮೂಲಕ ರಾಷ್ಟ್ರೀಯ ಪಕ್ಷಗಳಿಗೂ ಮುಂಚಿತವಾಗಿ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಬಿಡದಿಯ ಕೇತಗಾನಹಳ್ಳಿಯಲ್ಲಿ ಜೆಡಿಎಸ್ ಕೆಲವು ದಿನಗಳಿಂದಲೂ ನಡೆಸುತ್ತಿರುವ ಕಾರ್ಯಗಾರದಲ್ಲೇ ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಈ ಘೋಷಣೆ ಮಾಡಿದ್ದಾರೆ.
ನಿಯಾಜ್ ಶೇಖ್ ಅವರಿಗೆ ಹೆಚ್.ಡಿ.ಕುಮಾರಸ್ವಾಮಿ ಬಿ ಫಾರಂ ನೀಡಿದ್ದಾರೆ. ಅಕ್ಟೋಬರ್ 30ರಂದು ಹಾನಗಲ್ ಉಪಚುನಾವಣೆ ನಡೆಯಲಿದೆ. ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದ್ದು, ಅಂದು ಭವಿಷ್ಯ ನಿರ್ಧಾರವಾಗಲಿದೆ.
PublicNext
30/09/2021 05:56 pm