ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿ ಮೋದಿ ಭೇಟಿಯಾದ ಪಂಜಾಬ್ ಸಿಎಂ

ನವದೆಹಲಿ: ಪಂಜಾಬ್ ರಾಜ್ಯ ರಾಜಕೀಯದಲ್ಲಿ ಇತ್ತಿಚೆಗೆ ಸಾಕಷ್ಟು ಬದಲಾವಣೆಗಳಾಗಿವೆ. ಈ ಎಲ್ಲ ಬದಲಾವಣೆಗಳ ಬಳಿಕ ಇದೀಗ ಚರಣ್ಜಿತ್ ಸಿಂಗ್ ಪಂಜಾಬ್ ಮುಖ್ಯಮಂತ್ರಿ ಪಟ್ಟದಲ್ಲಿದ್ದಾರೆ. ಸದ್ಯ ನೂತನ ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚನ್ನಿ ರೈತರ ಪ್ರತಿಭಟನೆ ವಿಚಾರವಾಗಿ ಚರ್ಚೆ ನಡೆಸಿರುವುದಾಗಿ ತಿಳಿಸಿದರು.

ಪ್ರಧಾನಿ ಭೇಟಿಯ ಬಳಿಕ ಮಾತನಾಡಿದ ಚನ್ನಿ, ಪ್ರತಿಭಟನಾ ನಿರತ ರೈತರೊಂದಿಗೆ ಮತ್ತೆ ಮಾತುಕತೆ ನಡೆಸುವಂತೆ ಕೋರಿದ್ದೇನೆ, ಹಾಗೇ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿರುವೆ ಎಂದರು.

ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ವರ್ಷ ನವೆಂಬರ್ನಿಂದ ದೆಹಲಿಯ ಗಡಿ ಭಾಗಗಳಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ಒತ್ತಾಯಿಸಿದ್ದಾರೆ.

Edited By : Nirmala Aralikatti
PublicNext

PublicNext

01/10/2021 07:36 pm

Cinque Terre

71.87 K

Cinque Terre

1

ಸಂಬಂಧಿತ ಸುದ್ದಿ