ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮರು ನೇಮಕಗೊಂಡ ಬಳಿಕ ಮೊದಲ ಬಾರಿಗೆ ಹೊನ್ನಾಳಿಗೆ ಆಗಮಿಸಿದ ಶಾಸಕ ಎಂ. ಪಿ. ರೇಣುಕಾಚಾರ್ಯ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.
ರೇಣುಕಾಚಾರ್ಯ ಹೊನ್ನಾಳಿ ಪಟ್ಟಣಕ್ಕೆ ಬರುತ್ತಿದ್ದಂತೆ ಪಟಾಕಿ ಸಿಡಿಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.
ನಗರದ ಸಂಗೊಳ್ಳಿರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು ಸಿಹಿ ಹಂಚುವ ಮೂಲಕ ಖುಷಿಪಟ್ಟರು. ನಗರದ ವಿವಿಧ ಕಡೆ ಪಟಾಕಿ ಸಿಡಿಸಲಾಯಿತು. ರೇಣುಕಾಚಾರ್ಯ ಪರ ಘೋಷಣೆ ಕೂಗಿದ ಕಾರ್ಯಕರ್ತರು, ಅಭಿನಂದಿಸಿದರು.
ಈ ವೇಳೆ ಮಾತನಾಡಿದ ರೇಣುಕಾಚಾರ್ಯ ನನ್ನನ್ನು ಎರಡನೇ ಬಾರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ನೇಮಕ ಮಾಡಿದ್ದಕ್ಕಾಗಿ ಸಿಎಂ ಬಸವರಾಜ್ ಬೊಮ್ಮಾಯಿ, ಪಕ್ಷದ ರಾಷ್ಟ್ರೀಯ ವರಿಷ್ಟರು, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಹೊನ್ನಾಳಿ- ನ್ಯಾಮತಿ ಅವಳಿ ತಾಲೂಕಿನ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
PublicNext
02/10/2021 10:34 am