ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟ್ವಿಟರ್‌ನಲ್ಲಿ ಟ್ರೆಂಡ್ ಆಯ್ತು 'ಘೋಡ್ಸೆ ಜಿಂದಾಬಾದ್': ಬಿಜೆಪಿ ಸಂಸದ ವರುಣ್ ಗಾಂಧಿ ವಿರೋಧ

ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಜಯಂತಿಯಂದು ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹ್ಯಾಷ್ ಟ್ಯಾಗ್ ಮೂಲಕ ವೈಭವೀಕರಿಸಲಾಗಿದೆ. ಇದರ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸದ್ದಾರೆ. ಇಂತವರು ಬೇಜವಾಬ್ದಾರಿಯಿಂದ ಇಡೀ ದೇಶ ನಾಚಿಕೆಪಡುವಂತೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

"ಭಾರತವು ಯಾವಾಗಲೂ ಆಧ್ಯಾತ್ಮಿಕ ಮಹಾಶಕ್ತಿಯಾಗಿದೆ. ಆದರೆ ಮಹಾತ್ಮರು ತಮ್ಮ ಅಸ್ತಿತ್ವದ ಮೂಲಕ ನಮ್ಮ ರಾಷ್ಟ್ರದ ಆಧ್ಯಾತ್ಮಿಕ ಶಕ್ತಿಗೆ ಭದ್ರ ಬುನಾದಿ ಹಾಕಿದರು. ಅದು ಇಂದಿಗೂ ನಮ್ಮ ದೊಡ್ಡ ಶಕ್ತಿಯಾಗಿ ಉಳಿದಿದೆ. 'ಗೋಡ್ಸೆ ಜಿಂದಾಬಾದ್' ಎಂದು ಟ್ವೀಟ್ ಮಾಡುವುದು ಬೇಜವಾಬ್ದಾರಿಯಿಂದ ಕೂಡಿದ್ದು, ಈ ರೀತಿ ಟ್ವೀಟ್ ಮಾಡಿರುವ ರಾಷ್ಟ್ರವನ್ನು ಅವಮಾನಿಸುತ್ತಿದ್ದಾರೆ" ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

02/10/2021 10:19 pm

Cinque Terre

39.78 K

Cinque Terre

22