ಚಾಮರಾಜನಗರ: ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಸತೊಂದು ಸವಾಲು ಹಾಕಿದ್ದಾರೆ. ತಾಕತ್ತಿದ್ದರೆ ಮೈಸೂರಿನಲ್ಲಿ ಚುನಾವಣೆಗೆ ಸ್ಪರ್ಧಿಸಿ, ಪಕ್ಷ ಸಂಘಟನೆ ಮಾಡಿ ಗೆದ್ದು ತೋರಿಸಿ ಎಂದಿದ್ದಾರೆ.
ಚಾಮರಾಜನಗರದ ನಂದಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಅಲೆಯುತ್ತಿದ್ದು ಜಮೀರ್ ಕಾಲಿಡಿದುಕೊಂಡು ಚಾಮರಾಜ ಪೇಟೆಗೆ ಹೋಗುತ್ತಿದ್ದಾರೆ. ನಿಮಗೆ ಧೈರ್ಯ ಇದ್ದರೆ ಮೈಸೂರಿಗೆ ಬಂದು ಪಕ್ಷವನ್ನ ಸಂಘಟನೆ ಮಾಡಿ ಚುನಾವಣೆ ಗೆಲ್ಲಿ. ಮೊದಲು ಮುಖ್ಯಮಂತ್ರಿಗಳಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯನ್ನ ಎದುರಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷದ ಅಧ್ಯಕ್ಷರು ಅಮೇಥಿ ಕ್ಷೇತ್ರದಲ್ಲಿ ಸೋತು ಸುಣ್ಣವಾಗಿದ್ದಾರೆ. ಕೇವಲ ಸೋನಿಯಾ ಗಾಂಧಿ ಮಾತ್ರ ಉತ್ತರ ಪ್ರದೇಶದಲ್ಲಿ ಗೆದ್ದಿದ್ದಾರೆ ಎಂದು ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
PublicNext
02/10/2021 10:42 pm