ಕೋಲ್ಕತ್ತಾ : ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸಿದ್ದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಲಿದೆ.
ಪಶ್ಚಿಮ ಬಂಗಾಳ ಭವಾನಿಪುರ ಉಪಚುನಾವಣೆ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಕೋಲ್ಕತ್ತಾದಲ್ಲಿ ಪ್ರಾರಂಭವಾಗಲಿದೆ. ಭವಾನಿಪುರ ಉಪಚುನಾವಣೆ ಮಮತಾ ಬ್ಯಾನರ್ಜಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತದೆ. ಬಂಗಾಳದ ಭವಾನಿಪುರ ವಿಧಾನಸಭಾ ಉಪಚುನಾವಣೆ ಸೆಪ್ಟೆಂಬರ್ 30 ರಂದು ನಡೆದಿದ್ದು, 57.09 ರಷ್ಟು ಮತದಾನವಾಗಿದೆ.
ಈ ಹಿಂದೆ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರ ಪಕ್ಷ ಟಿಎಂಸಿ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾದ ಮಮತಾ ಬ್ಯಾನರ್ಜಿ ಅವರಿಗೆ ಸಿಎಂ ಸ್ಥಾನ ಉಳಿಸಿಕೊಳ್ಳಲು ಈ ಉಪಚುನಾವಣೆ ಗೆಲುವು ಅನಿವಾರ್ಯವಾಗಿದೆ.
PublicNext
03/10/2021 07:37 am