ಮೈಸೂರು: ಬರುವ ವಿಧಾನ ಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷ ಇಬ್ಭಾಗ ಆಗಲಿದೆ. ಈ ಕಡೆ ಸಿದ್ದರಾಮಯ್ಯ, ಆ ಕಡೆ ಡಿ.ಕೆ ಶಿವಕುಮಾರ್ ಇಬ್ಬರಿಗೂ ಅಧಿಕಾರ ಬೇಕು. ಇದೇ ಕಾರಣಕ್ಕಾಗಿ ಕಾಂಗ್ರೆಸ್ ಇಬ್ಭಾಗ ಆಗಲಿದೆ. ಇದರಲ್ಲಿ ಅನುಮಾನವೇ ಇಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುವ ಹುಚ್ಚು ಕನಸು ಕಾಣುತ್ತಿದ್ದಾರೆ. ಸಿಎಂ ಆಗೋದು ಒಂದೆಡೆ ಇರಲಿ. ಮೊದಲು ಅವರು ಚುನಾವಣೆಯಲ್ಲಿ ಗೆದ್ದು ತೋರಿಸಲಿ ಎಂದು ಈಶ್ವರಪ್ಪ ಸವಾಲು ಹಾಕಿದ್ದಾರೆ. ಕಳೆದ ಚುನಾವಣೆಯಲ್ಲಿ ಮೈಸೂರಿನಲ್ಲಿ ಸಿದ್ಧರಾಮಯ್ಯ ಸೋತಿದ್ದನ್ನು ಉಲ್ಲೇಖಿಸಿದ ಈಶ್ವರಪ್ಪ, ‘‘ಚಾಮುಂಡೇಶ್ವರಿಯಲ್ಲಿ ಸೋತಿದ್ದು ಏಕೆ ಎಂಬುದನ್ನು ಮೊದಲು ಹೇಳಿ, ನಂತರ ಕನಸು ಕಾಣಿ’’ ಎಂದಿದ್ದಾರೆ.
PublicNext
03/10/2021 10:31 am