ಬೆಳಗಾವಿ (ಚಿಕ್ಕೋಡಿ): ಬೇರೆ ಪಕ್ಷದ ಕೆಲವು ಶಾಸಕರು ಸದ್ಯದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
40 ಜನ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ ಎಂಬ ವಿಚಾರವಾಗಿ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, "ಈ ಬಗ್ಗೆ ವರಿಷ್ಠರ ಮಟ್ಟದಲ್ಲಿ ಚರ್ಚೆ ಆಗಿದ್ದು ನಿಜ. ಆದರೆ ಯಾರು, ಎಷ್ಟು ಜನ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾಹಿತಿ ಸಿಕ್ಕಿಲ್ಲ" ಎಂದು ತಿಳಿಸಿದರು.
PublicNext
03/10/2021 04:12 pm