ಅಥಣಿ: ಪ್ರಸ್ತುತ ಬಿಜೆಪಿ ಪಕ್ಷದಲ್ಲಿ ಯಾವುದು ಸರಿ ಇಲ್ಲಾ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಬೆಳಗಾವಿ ಜಿಲ್ಲೆಯ ಮೂರು ಪ್ರಭಾವಿ ನಾಯಕರಿಗೆ ಸಚಿವ ಸ್ಥಾನ ತಪ್ಪಿಸಲಾಗಿದೆ. ಅವರೊಂದಿಗೆ ಒಟ್ಟು ನಲ್ವತ್ತು ಜನ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬರುತ್ತಿದ್ದಾರೆ ಎಂದು ಕಾಗವಾಡ ಮಾಜಿ ಶಾಸಕ ರಾಜು ಕಾಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಅವರು ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾದ್ಯಮಗಳ ಜೊತೆ ಮಾತನಾಡುತ್ತಾ, ಸದ್ಯ ಬಿಜೆಪಿ ಪಕ್ಷದಲ್ಲಿ ಒಳ ಜಗಳ ಹೆಚ್ಚಾಗಿದೆ, ಆಂತರಿಕ ಭಿನ್ನಾಭಿಪ್ರಾಯ ಇರುವುದರಿಂದ ೪೦ ಜನ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಇಷ್ಟರಲ್ಲೇ ಬರುತ್ತಾರೆಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.
ಸದ್ಯ ನರೇಂದ್ರ ಮೋದಿ ಅವರ ವರ್ಚಸ್ಸು ದಿನದಿಂದ ದಿನಕ್ಕೆ ಕ್ಷೀಣವಾಗಿದೆ. ಹಾಗೂ ಸಂಪೂರ್ಣವಾಗಿ ಬಿಜೆಪಿ ಸರ್ಕಾರ ಜನ ವಿರೋಧಿಯಾಗಿದೆ, ದಿನನಿತ್ಯ ಬಳಸುವ ವಸ್ತುಗಳು ಬೆಲೆ ಏರಿಕೆಯಿಂದಾಗಿ ಜನರಿಗೆ ಬಿಜೆಪಿ ಪಕ್ಷದ ಮೇಲಿನ ನಂಬಿಕೆ ಇಲ್ಲದಂತಾಗಿದೆ, ಇಪ್ಪತ್ತು ವರ್ಷಗಳಿಂದ ನಾನು ಶಾಸಕನಾಗಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿದ್ದೇನೆ, ಜನರ ನಾಡಿ ಮಿಡಿತ ನನಗೆ ಗೊತ್ತು ಸದ್ಯದಲ್ಲೇ ಬಿಜೆಪಿ ಪಕ್ಷದಿಂದ ೪೦ ಜನ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ ಎಂದು ತಿಳಿಸಿದರು.
PublicNext
03/10/2021 05:38 pm