ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಅರಸೀಕೆರೆಯಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ; ಗೊಂದಲದ ಗೂಡಾದ ಸಭೆ

ಹಾಸನ: ಜಿಲ್ಲೆಯ ಅರಸೀಕೆರೆ ನಗರದ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ - ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಆಸ್ಪತ್ರೆ ವ್ಯಾಪ್ತಿಯಲ್ಲಿ ಬರುವ ನಗರಸಭೆ ಸದಸ್ಯರನ್ನು ಕಡೆಗಣಿಸಿ ಅವಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿ ಗಲಾಟೆ ನಡೆದಿದೆ.

ಪ್ರತಿ ಬಾರಿಯೂ ಇಂತಹದ್ದೇ ವರ್ತನೆ ತೋರುತ್ತಿದ್ದಾರೆಂದು ಆರೋಪಿಸಿ ಸಭೆಯಲ್ಲಿಯೇ ಶಾಸಕ ಶಿವಲಿಂಗೇಗೌಡ ವಿರುದ್ಧ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ಅಧಿಕಾರ ದೊರೆತು ಹಲವು ತಿಂಗಳು ಕಳೆದರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ನೆರೆದಿದ್ದವರು ಮಾತಿನ ಚಾಟಿ ಬೀಸಿದಾಗ ಮೈಕ್ ಹಿಡಿದು ಸಮಾಧಾನ ಪಡಿಸಲು ಶಾಸಕರು ಹರಸಾಹಸಪಟ್ಟಿದ್ದಾರೆ ನಂತರ ಪೊಲೀಸರ ಮಧ್ಯೆ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿದೆ.

Edited By : Shivu K
PublicNext

PublicNext

03/10/2021 08:32 pm

Cinque Terre

86.6 K

Cinque Terre

0

ಸಂಬಂಧಿತ ಸುದ್ದಿ