ಬೆಂಗಳೂರು: ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿದ ಪ್ರಕರಣದಲ್ಲಿ ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಮೃತ ರೈತರ ಮನೆಗೆ ಭೇಟಿ ನೀಡದಂತೆ ತಡೆಯಲಾಗಿದೆ. ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ಬಂಧಿಸಿದ್ದಾರೆ. ಪುರುಷ ಪೊಲೀಸರು ಪ್ರಿಯಾಂಕಾ ಗಾಂಧಿಯವರನ್ನು ಎಳೆದಾಡಿದ್ದಾರೆ. ಇದು ದೇಶದ ಪ್ರತಿ ಹೆಣ್ಣು ಮಗುವಿಗೆ ಮಾಡುತ್ತಿರುವ ಅಪಮಾನ. ದೇಶದ ಪ್ರತಿಯೊಬ್ಬರೂ ಇದನ್ನು ಖಂಡಿಸಬೇಕು. ಬೇರೆಲ್ಲೂ ಇಲ್ಲದ ಕಾನೂನು ಉತ್ತರ ಪ್ರದೇಶದಲ್ಲಿ ಮಾತ್ರ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
PublicNext
04/10/2021 03:10 pm