ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಂಸಾಚಾರದ ಬಗ್ಗೆ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ಕಿಡಿಕಾರಿದ ರಾಹುಲ್

ದೆಹಲಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಸಂದರ್ಭ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ಮೌನ ತಾಳಿರುವವರು ಈಗಾಗಲೇ ಸತ್ತಿದ್ದಾರೆ ಎಂದು ಕಟುವಾಗಿ ನುಡಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಭಾನುವಾರ ನಡೆದ ಹಿಂಸಾಚಾರವನ್ನು ಅಮಾನವೀಯ ಹತ್ಯಾಕಾಂಡ ಎಂದು ಟ್ವೀಟ್ ಮಾಡಿರುವ ಅವರು, ಈ ಅಮಾನವೀಯ ಹತ್ಯಾಕಾಂಡವನ್ನು ನೋಡಿದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ ಎಂದರ್ಥ.

ಆದರೆ ನಾವು ಈ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಕಿಸಾನ್ ಸತ್ಯಾಗ್ರಹ ಜಿಂದಾಬಾದ್ ಎಂದು ಟ್ವೀಟ್ ಮಾಡಿದ್ದಾರೆ. ಸಚಿವ ಅಜಯ್ ಮಿಶ್ರಾ ತೆನಿ ಈಚೆಗೆ ರೈತರ ಪ್ರತಿಭಟನೆ ಕುರಿತು ಕಟುವಾದ ಹೇಳಿಕೆ ನೀಡಿದ್ದಲ್ಲದೆ ಪ್ರತಿಭಟಿಸುವವರ ಮೇಲೆ ಕ್ರಮ ಕೈಗೊಳ್ಳುವ ಬಹಿರಂಗ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರ ತವರು ಕ್ಷೇತ್ರ ಲಖಿಂಪುರ ಖೇರಿಯಲ್ಲಿ ಸೇರಿದ್ದ ರೈತರು ಸಚಿವರ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದರು.

Edited By : Nagaraj Tulugeri
PublicNext

PublicNext

04/10/2021 05:37 pm

Cinque Terre

26.55 K

Cinque Terre

7

ಸಂಬಂಧಿತ ಸುದ್ದಿ