ಚಿಕ್ಕಬಳ್ಳಾಪುರ:ಉತ್ತರಪ್ರದೇಶದ ಲಖಿಂಪುರದಲ್ಲಿ ರೈತರ ಸಾವು-ಹಿಂಸಾಚಾರ ಪ್ರಕರಣ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತ ಹಾಗೂ ಗೌರಿಬಿದನೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕೈ ಕಾರ್ಯಕರ್ತರು ಉತ್ತರ ಪ್ರದೇಶ ಸರ್ಕಾರದ ನಡೆಯನ್ನು ಖಂಡಿಸಿದರು.
ಜೊತೆಗೆ ರೈತರಿಗೆ ಸಾಂತ್ವನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಅಲ್ಲಿನ ಪೊಲೀಸರು ದಾರಿಯಲ್ಲೇ ತಡೆದು ವಶಕ್ಕೆ ಪಡೆದಿದ್ದಾರೆ. ಇದು ಅಸಂವಿಧಾನಿಕ ನಡೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
04/10/2021 08:54 pm