ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ ದೆಹಲಿಗೆ ಆಗಮಿಸುವಂತೆ ಬುಲಾವ್ ನೀಡಿದ್ದಾರೆ. ಈ ಹಿನ್ನೆಲೆ ನಾಳೆ ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಉಪಚುನಾವಣೆ ಹೊತ್ತಿನಲ್ಲಿ ಸಿದ್ದರಾಮಯ್ಯ ದೆಹಲಿ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ.
ಹಾನಗಲ್ ಟಿಕೆಟ್ ವಿಚಾರವಾಗಿ ಸಿದ್ದರಾಮಯ್ಯಗೆ ಕರೆ ನೀಡಿದ್ದಾರೆ ಎನ್ನಲಾಗಿದ್ದು, ಈಗಾಗಲೇ ಸಿಂಧಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಫೈನಲ್ ಆಗಿದ್ದು, ಮನಗೂಳಿ ಕಣದಲ್ಲಿದ್ದಾರೆ. ಉಳಿದಿರುವ ಹಾನಗಲ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ ಶ್ರೀನಿವಾಸ್ ಮಾನೆ ಹಾಗೂ ಮನೋಹರ್ ತಹಶೀಲ್ದಾರ್ ನಡುವೆ ತೀವ್ರ ಪೈಪೋಟಿ ಉಂಟಾಗಿದೆ. ಆದ್ದರಿಂದ ಸೋನಿಯಾ ಗಾಂಧಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕರೆ ಮಾಡಿದ್ದು, ದೆಹಲಿಗೆ ಆಗಮಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
PublicNext
04/10/2021 09:57 pm