ಬೆಂಗಳೂರು: ಉತ್ತರ ಪ್ರದೇಶದಲ್ಲಿ ಲಿಖೀಂಪುರ ಖೇರಿಯಲ್ಲಿ ಹಿಂಸಾಚಾರ ಹಾಗೂ ಪ್ರಿಯಾಂಕಾ ಗಾಂಧಿ ಗೃಹ ಬಂಧನ ಖಂಡಿಸಿ ಕಾಂಗ್ರೆಸ್ ನಾಯಕರು ರಾಜಭವನ ಚಲೋಗೆ ಮುಂದಾಗಿದ್ದಾರೆ.
ಪಂಜಿನ ಮೆರವಣಿಗೆ ಮೂಲಕ ನಾಯಕರು ರಾಜಭವನದ ಚಲೋಗೆ ಮುಂದಾಗಿದ್ದು, ಮೆರವಣಿಗೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಮತ್ತಿತರರು ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾರ್ ಸೇರಿ 15 ನಾಯಕರಿಗೆ ಮಾತ್ರ ರಾಜ್ಯಪಾಲರ ಭೇಟಿಗೆ ಅವಕಾಶ ನೀಡಲಾಗಿದೆ.ಕಾಂಗ್ರೆಸ್ ನಾಯಕರ ರಾಜಭವನ ಚಲೋ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಿಂದ ರಾಜಭವನಕ್ಕೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
PublicNext
04/10/2021 11:02 pm