ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೇಂದ್ರ ಸಚಿವರ ಪುತ್ರ ಕಾರು ಹರಿಸಿ ರೈತರ ಹತ್ಯೆ ಮಾಡಿದರೂ, ಮಂತ್ರಿಗಳು ಇನ್ನೂ ಯಾಕೆ ರಾಜಿನಾಮೆ ನೀಡಿಲ್ಲ: ಡಿಕೆಶಿ ಪ್ರಶ್ನೆ

ಮಂಗಳೂರು: ಕೇಂದ್ರದ ಸಚಿವರೋರ್ವರ ಪುತ್ರ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿ 4 ಮಂದಿಯನ್ನು ಹತ್ಯೆ ಮಾಡಿದ್ದಾನೆ. ಪರಿಣಾಮ ರೊಚ್ಚಿಗೆದ್ದ ಜನರು ದಾಳಿ ಮಾಡಿದ್ದಾರೆ. ಇದು ಕೂಡ ನಡೆಯಬಾರದ ಘಟನೆ. ಆದರೆ ಈ ಘಟನೆಗೆ ಕಾರಣರಾದವರನ್ನು ಇನ್ನೂ ಬಂಧಿಸಲಾಗಿಲ್ಲ.‌ ಮಂತ್ರಿಗಳು ಯಾಕೆ ಇನ್ನೂ ರಾಜೀನಾಮೆ ನೀಡಿಲ್ಲ‌‌. ಇದು ಒಂದು ಸರ್ಕಾರನಾ ಎಂದು‌ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ.ಶಿವಕುಮಾರ್ ಮಂಗಳೂರಿನಲ್ಲಿಂದು ಪ್ರಶ್ನಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಹಾಗೂ ಪ್ರತಿಭಟನೆ ನಮ್ಮ ಹಕ್ಕು. ಅಹಿಂಸಾ ಮಾರ್ಗದಲ್ಲಿ ಹೋರಾಟ ಮಾಡುವುದನ್ನು ಗಾಂಧೀಜಿಯವರು ನಮಗೆ ಹೇಳಿಕೊಟ್ಟ ಪಾಠ. ರೈತರು ಕಳೆದ 10 ತಿಂಗಳಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಮಂತ್ರಿಗಳಾಗಲಿ, ಮಂತ್ರಿಗಳಾಗಲಿ ಯಾರೂ ರೈತರನ್ನು ಭೇಟಿ ಮಾಡಿ ಮಾತನಾಡಿಲ್ಲ ಎಂದು ಈ ಸಂದರ್ಭ ಅವರು ತಿಳಿಸಿದರು.

ಹಿಂದೆ ತಾನು ಇಂಧನ ಸಚಿವನಾಗಿದ್ದ ಸಂದರ್ಭ ಯಾರೋ ಓರ್ವ ವ್ಯಕ್ತಿ ನನಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಬಗ್ಗೆ ಅಧಿಕಾರಿಗಳು ದೂರು ದಾಖಲಿಸಿದ್ದರು. ಆ ಬಳಿಕ ಆತ ಆ ಅಧಿಕಾರಿಗಳಿಗೂ ನಿಂದಿಸಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಬರಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಮೊದಲ ಬಾರಿಗೆ ನನಗೆ ಇದು ತಿಳಿದಿರಲಿಲ್ಲ. ಹೀಗಾಗಿ ನ್ಯಾಯಾಲಯಕ್ಕೆ ತಲೆಬಾಗಿ ಈಗ ಆಗಮಿಸಿದ್ದೇನೆ ಎಂದು ಡಿಕೆಶಿ ಹೇಳಿದರು.

Edited By : Manjunath H D
PublicNext

PublicNext

05/10/2021 11:40 am

Cinque Terre

58.2 K

Cinque Terre

0

ಸಂಬಂಧಿತ ಸುದ್ದಿ