ಚಿತ್ರದುರ್ಗ : ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗುಯಿಲಾಳ್ ಟೋಲ್ ಬಳಿ ಕಾರ್ಯಕರ್ತರನ್ನು ಭೇಟಿ ಮಾಡಿ ಅವರಿಂದ ಸನ್ಮಾನ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ ಎರಡು ವರ್ಷಗಳಿಂದ ಸರ್ಕಾರ ವಿಫಲವಾಗಿದೆ. ಇದೊಂದು ನಿರ್ಜೀವ ಸರ್ಕಾರವಾಗಿದೆ. ಯಾವ ಪುರುಷಾರ್ಥಕ್ಕೆ ಜನರು ಮತ ನೀಡಬೇಕು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗ್ಯಾಸ್ ಬೆಲೆ 400 ರಿಂದ 900 ರೂ ಬೆಲೆ ಏರಿಕೆ ಮಾಡಿದ್ದಕ್ಕೆ ಮತ ನೀಡಬೇಕಾ ?. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಕ್ಕೆ ಮತ ನೀಡಬೇಕಾ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಣ ಹಾಕುತ್ತೇವೆ ಸುಳ್ಳು ಭರವಸೆ ನೀಡಿದ ಪ್ರಧಾನಿಗೆ ಮತ ನೀಡಬೇಕಾ ?. ಯುವಕರಿಗೆ ಉದ್ಯೋಗ ಕೊಡ್ತೀವಿ ಅಂದು, ಪಕೋಡ ಮಾರಿ ಎಂದಿದ್ದಕ್ಕೆ ಮತ ನೀಡಬೇಕಾ ?. ಯಾವುದಕ್ಕೆ ಮತ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಕೇಳುತ್ತಿದೆ ಎನ್ನುವ ಮೂಲಕ ಮಾತಿನ ಉದ್ದಕ್ಕೂ ಪ್ರಶ್ನೆ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಡಳಿತದಿಂದ ಜನರು ಭ್ರಮನಿರಸವಾಗಿದ್ದಾರೆ. ಇನ್ನೂ ಉತ್ತರ ಪ್ರದೇಶದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು ಉತ್ತರ ಪ್ರದೇಶದಲ್ಲಿ ಸರ್ಕಾರ ಇದಿಯೋ, ಇಲ್ಲವೋ ಅರ್ಥವಾಗುತ್ತಿಲ್ಲ. ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬರುವಾಗ ರಾಮರಾಜ್ಯ ಮಾಡ್ತೀವಿ ಅಂದು ಈಗ ರಾವಣ ರಾಜ್ಯ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಸ್ವರ್ಗ ತೋರುಸ್ತಿವಿ ಅಂದ ಪ್ರಧಾನಿ ಜನರಿಗೆ ನರಕ ತೋರಿಸಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
PublicNext
05/10/2021 01:27 pm