ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೋನಿಯಾ ಭೇಟಿಯಾದ ಸಿದ್ದು : ಸುದೀರ್ಘ ಚರ್ಚೆ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಮಂಗಳವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ.

ಸೋನಿಯಾ ಅವರನ್ನು ಭೇಟಿ ಮಾಡಿದ ಸಿದ್ದು ಬರೋಬ್ಬರಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. ಸೋನಿಯಾ ಗಾಂಧಿಯವರೊಂದಿಗೆ ಮಾತುಕತೆ ಬಳಿಕ ಹೊರಬಂದ ಸಿದ್ದರಾಮಯ್ಯ ಅವರು, ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ.

ಪಂಜಾಬ್, ಛತ್ತೀಸ್ಗಢ, ಕೇರಳ ಕಾಂಗ್ರೆಸ್ ನಲ್ಲಿ ಸ್ವಲ್ಪಮಟ್ಟದ ಅಸಮಾಧಾನಗಳು ಕಾಣಿಸಿಕೊಂಡಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಅಲ್ಲದೇ, ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿದ್ದು, ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆಯೂ ಚರ್ಚೆ ನಡೆಸಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Edited By : Nirmala Aralikatti
PublicNext

PublicNext

05/10/2021 02:33 pm

Cinque Terre

51.33 K

Cinque Terre

2