ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಮಂಗಳವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ.
ಸೋನಿಯಾ ಅವರನ್ನು ಭೇಟಿ ಮಾಡಿದ ಸಿದ್ದು ಬರೋಬ್ಬರಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ‘ಕೈ’ ಪಕ್ಷ ಸಂಘಟನೆ ಬಗ್ಗೆ ಸೋನಿಯಾ ಜೊತೆ ಚರ್ಚೆ ಮಾಡಿದ್ದಾರೆ.
ಇನ್ನು ಸೋನಿಯಾ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ನನ್ನನ್ನು ಆಹ್ವಾನಿಸಿಲ್ಲ, ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ಎಂಬುದು ಸುಳ್ಳು. ಈ ಹಿಂದೆ ರಾಹುಲ್ ಗಾಂಧಿ ಆಹ್ವಾನ ನೀಡಿದ್ದರು. ನಾನು ರಾಷ್ಟ್ರ ರಾಜಕಾರಣಕ್ಕೆ ಬರಲ್ಲ ಎಂದಿದ್ದೆ ನನಗೆ ರಾಷ್ಟ್ರ ರಾಜಕಾರಣದ ಬಗ್ಗೆ ಆಸಕ್ತಿಯೇ ಇಲ್ಲ ಎಂದು ಹೇಳಿದ್ದಾರೆ.
PublicNext
05/10/2021 04:19 pm