ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

ಬೆಂಗಳೂರು: ಅ.30ರಂದು ನಡೆಯಲಿರುವ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಸಿಂದಗಿ ವಿಧಾನಸಭಾ ಕ್ಷೇತ್ರದಿಂದ ಅಶೋಕ ಮನಗೂಳಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶ್ರೀನಿವಾಸ್ ಮಾನೆ ಅವರನ್ನು ಅಭ್ಯರ್ಥಿಗಳಾಗಿ ಘೋಷಣೆ ಮಾಡಲಾಗಿದೆ.

ಇನ್ನು ಭಾರಿ ಗುದ್ದಾಟಕ್ಕೆ ಕಾರಣವಾಗಿದ್ದ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಮನೋಹರ್ ತಹಶೀಲ್ದಾರ್ ಟಿಕೆಟ್ ಗಾಗಿ ಭಾರಿ ಪೈಪೋಟಿ ನಡೆಸಿದ್ದರು. ಹೊರಗಿನವರಿಗೆ ಟಿಕೆಟ್ ಕೊಡದಂತೆ ಮನವಿಯನ್ನು ಮಾಡಿದ್ದರು. ಆದರೆ ಅಂತಿಮವಾಗಿ ಶ್ರೀನಿವಾಸ ಮಾನೆ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ. ಮನೋಹರ ತಹಶೀಲ್ದಾರ್ ಅವರಿಗೆ ಮತ್ತೆ ನಿರಾಸೆಯಾಗಿದೆ.

Edited By : Nirmala Aralikatti
PublicNext

PublicNext

05/10/2021 07:33 pm

Cinque Terre

61.4 K

Cinque Terre

1

ಸಂಬಂಧಿತ ಸುದ್ದಿ