ಹುಬ್ಬಳ್ಳಿ: ಬೆಳಗಾವಿಯ ಸುವರ್ಣ ಸೌಧದಲ್ಲೇ ಈ ಭಾರಿಯ ಚಳಿಗಾಲ ಅಧಿವೇಶನ ನಡೆಯಲಿದೆ. ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಹಾಗೂ ಸಭಾಪತಿ ಇರುವಾಗ ವ್ಯವಸ್ಥಿತವಾಗಿ ಡಿಸೆಂಬರ್ ವಾರದಲ್ಲಿ ಅಧಿವೇಶನ ನಡೆಯಲಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಾರು ಮೂರು ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಈ ನಿಟ್ಟಿನಲ್ಲಿ ಈ ಬಾರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ವ್ಯವಸ್ಥಿತ ರೀತಿಯಲ್ಲಿ ಪ್ರತಿಪಕ್ಷ ನಾಯಕರ ಜೊತೆಗೆ ಮಾತನಾಡಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.
ಇನ್ನೂ ಮಹದಾಯಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮಹದಾಯಿ ಕಾಮಗಾರಿ ಕೂಡಲೇ ಪ್ರಾರಂಭವಾಗಬೇಕು. ಈ ಬಗ್ಗೆ ಇದುವರೆಗೂ ನಾನು ಸಿಎಂ ಜೊತೆಗೆ ಮಾತನಾಡಿಲ್ಲ. ಶೀಘ್ರವೇ ಈ ಕುರಿತು ಮಾತನಾಡಿ ಸಲಹೆ ಸೂಚನೆಗಳನ್ನು ನೀಡುತ್ತೇನೆ ಎಂದರು.
PublicNext
06/10/2021 12:53 pm