ಬೆಂಗಳೂರು: ಉತ್ತರ ಪ್ರದೇಶದ ಲಖಿಮ್ ಪುರದಲ್ಲಿ ನಡೆದ ರೈತರ ಹಾಗೂ ಬಿಜೆಪಿ ಕಾರ್ಯಕರ್ತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಪಂಜಿನ ಮೆರವಣಿಗೆ ಹಮ್ಮಿಕೊಂಡಿದ್ದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಅವಮಾನ. ಜಲಿಯನ್ ವಾಲಾ ಬಾಗ್ ಘಟನೆಗಿಂತ ದೊಡ್ಡದು, ಇಂತಹ ಕೆಟ್ಟ ವ್ಯವಸ್ಥೆಗೆ ತಂದಿದ್ದಾರೆ. ಜನರೇ ಎಚ್ಚೆತ್ತುಕೊಳ್ಳಬೇಕು ಎಂದರು.
ಈ ವೇಳೆ ಡಿಕೆಶಿ ಜಲಿಯನ್ ವಾಲಾ ಬಾಗ್ ಪದ ಉಚ್ಚರಿಸಲು ಪರದಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಅನೇಕರು ಈ ವಿಡಿಯೋವನ್ನು ಟ್ವಿಟರ್ ನಲ್ಲಿ ಶೇರ್ ಮಾಡಿಕೊಂಡು ಎಣ್ಣೆ ಜಾಸ್ತಿ ಹೊಡೆದರೆ ಹೀಗೇ ನಾಲಿಗೆ ತೊದಲುವುದು ಸಹಜ ಸೇರಿದಂತೆ ವಿವಿಧ ರೀತಿಯ ಶೀರ್ಷಿಕೆ ಬರೆದುಕೊಂಡಿದ್ದಾರೆ.
PublicNext
06/10/2021 07:16 pm