ಲಕ್ನೋ : ಉತ್ತರಪ್ರದೇಶ ಲಖಿಂಪುರ ಖೇರಿಗೆ ತೆರಳುತ್ತಿದ್ದ ವೇಳೆ ಬಂಧನಕ್ಕೆ ಒಳಗಾಗಿದ್ದ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಬುಧವಾರ ಸೀತಾಪುರ ಗೆಸ್ಟ್ ಹೌಸ್ ನಿಂದ ಬಿಡುಗಡೆ ಮಾಡಲಾಗಿದ್ದು, ಪ್ರಿಯಾಂಕ ಗಾಂಧಿ ಕೂಟಾ ರೈತರ ಕುಟುಂಬವನ್ನು ಭೇಟಿಯಾಗಿದ್ದಾರೆ.
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಕುಟುಂಬವನ್ನು ಭೇಟಿಯಾಗಿದ್ದಾರೆ.
ಭೇಟಿ ವೇಳೆ "ಸಂತ್ರಸ್ತರ ಕುಟುಂಬಕ್ಕೆ ಖಂಡಿತವಾಗಿ ನ್ಯಾಯ ದೊರೆಯಬೇಕು. ನಾವು ಇಲ್ಲಿ ಮೃತ ರೈತರ ಕುಟುಂಬಕ್ಕೆ ಸಹಾಯ ಮಾಡಲು ಬಂದಿದ್ದೇವೆ. ಈ ಮೂಲಕ ಆಡಳಿತದ ಮೇಲೆ ಒತ್ತಡವನ್ನು ಹೇರಲು ಬಂದಿದ್ದೇವೆ," ಎಂದು ರಾಹುಲ್ ಗಾಂಧಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ನಿಯೋಗ ಮೃತಪಟ್ಟ 19 ವರ್ಷದ ಲವ್ ಪ್ರೀತ್ ಸಿಂಗ್ ಹಾಗೂ 30 ವರ್ಷದ ಸ್ಥಳೀಯ ಪತ್ರಕರ್ತ ರಮನ್ ಕಶ್ಯಪ್ ರ ಕುಟುಂಬವನ್ನು ಭೇಟಿಯಾಗಿದೆ. ಈ ನಡುವೆ ಸುಪ್ರೀಂ ಕೋರ್ಟ್ ಈ ನಾಲ್ವರು ರೈತರು ಸೇರಿದಂತೆ ಎಂಟು ಜನರ ಸಾವಿಗೆ ಕಾರಣವಾದ ಹಿಂಸಾಚಾರ ಪ್ರಕರಣವನ್ನು ಗುರುವಾರ ಕೈಗೆತ್ತಿಕೊಳ್ಳಲಿದೆ. ಈ ವಿಚಾರಣೆಯನ್ನು ಮುಖ್ಯ ನ್ಯಾಯಾಧೀಶ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ನಡೆಸಲಿದೆ.
PublicNext
07/10/2021 07:48 am