ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಂದಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬೂಸನೂರ್ ಗೆ ಟಿಕೆಟ್

ವಿಜಯಪುರ : ರಾಜ್ಯದ ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಅಕ್ಟೋಬರ್ 30 ರಂದು ಮತದಾನ ನಡೆಯಲಿದೆ. ನವೆಂಬರ್ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನದಿಂದಾಗಿ ಹಾವೇರಿಯ ಹಾನಗಲ್ ಕ್ಷೇತ್ರ, ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ನಿಧನದಿಂದಾಗಿ ವಿಜಯಪುರದ ಸಿಂದಗಿ ವಿಧಾನಸಭಾ ಕ್ಷೇತ್ರ ತೆರವಾಗಿತ್ತು.

ಹೀಗಾಗಿ ಉಪಚುನಾವಣೆ ಅನಿವಾರ್ಯವಾಗಿದೆ. ಈಗಾಗಲೇ ಎರಡು ಕ್ಷೇತ್ರಗಳಿಗೆ ಜೆಡಿಎಸ್ ಇಬ್ಬರು ಅಭ್ಯರ್ಥಿಗಳು ಯಾರೆಂದು ಘೋಷಣೆ ಮಾಡಿತ್ತು. ಇದೀಗ ಕಾಂಗ್ರೆಸ್ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಇದೀಗ ಬಿಜೆಪಿಯು ಸಿಂದಗಿ ಮತಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿದೆ.

ಹೌದು ಮಾಜಿ ಶಾಸಕ ರಮೇಶ ಬೂಸನೂರ್ ಅವರಿಗೆ ಬಿಜೆಪಿ ಟಿಕೇಟ್ ನೀಡಿದೆ. ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಮೇಶ ಬೂಸನೂರ ಮೂರನೇ ಬಾರಿ ಬೈ ಎಲೆಕ್ಷನಲ್ಲಿ ಅದೃಷ್ಟ ಪರಿಕ್ಷೆಗೆ ಮುಂದಾಗಿದ್ದಾರೆ.

Edited By : Nirmala Aralikatti
PublicNext

PublicNext

07/10/2021 09:39 am

Cinque Terre

26.87 K

Cinque Terre

0

ಸಂಬಂಧಿತ ಸುದ್ದಿ