ಹಾವೇರಿ : ಹಾನಗಲ್ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಬೈ ಎಲೆಕ್ಷನ್ ನಡೆಯುತ್ತಿದೆ. ಇನ್ನು ಈ ಉಪ ಚುನಾವಣೆಗೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಹೌದು ಹಾನಗಲ್ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಜ್ ಸಜ್ಜನರ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಇನ್ನು ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಪಟ್ಟಣದ ಬಿಜೆಪಿ ಕಚೇರಿ ಎದುರು ಕಮಲ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಇನ್ನು ಅಭ್ಯರ್ಥಿ ಹೆಸರು ಅಂತಿಮವಾಗುತ್ತಿದ್ದಂತೆ ಹಾನಗಲ್ ಬಿಜೆಪಿಯಲ್ಲಿ ಆಕ್ರೋಶ ಬುಗಿಲೆದ್ದಿದೆ ಸ್ಥಳೀಯರಿಗೆ ಟಿಕೆಟ್ ನೀಡದಿರುವುದಕ್ಕೆ ಕಾರ್ಯಕರ್ತರ ಪ್ರತಿಭಟನೆ ಹಾದಿ ಹಿಡಿದಿದ್ದಾರೆ. ರಸ್ತೆ ಮಧ್ಯೆ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
07/10/2021 02:03 pm