ಹಾವೇರಿ: ಹಾನಗಲ್ ಉಪಚುನಾವಣೆಯಲ್ಲಿ ನಾವು ಈಗಾಗಲೇ ಗೆದ್ದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಹಾನಗಲ್ ವಿಧಾನಸಭಾ ಉಪಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಇವತ್ತು ಸೇರಿದ ಜನಸಮೂಹ ಕಾಂಗ್ರೆಸ್ ಪಕ್ಷದ ಶಕ್ತಿ. ಜನರು ಈಗಾಗಲೇ ಬೆಲೆ ಏರಿಕೆಯಿಂದ ಬೇಸತ್ತು ಕಾಂಗ್ರೆಸ್ ಪರವಾಗಿ ನಿಂತಿದ್ದಾರೆ ಎಂದರು.
ಐಟಿ ದಾಳಿಯ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು,ಐಟಿ ದಾಳಿ ಬಗ್ಗೆ ಯಡಿಯೂರಪ್ಪನ್ನ ಕೇಳಿ ಎಂದು ಉತ್ತರಿಸಿದರು.
PublicNext
07/10/2021 03:13 pm