ಹುಬ್ಬಳ್ಳಿ: ಜನರು ಬಿಜೆಪಿ ಸರ್ಕಾರದ ಅಧಿಕಾರದಿಂದ ಬೇಸತ್ತು ಬದಲಾವಣೆ ಬಯಸಿದ್ದಾರೆ. ಈ ಬಾರಿ ಹಾನಗಲ್ ಹಾಗೂ ಸಿಂದಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲವು ಸಾಧಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.
ನಗರದಲ್ಲಿಂದು ಖಾಸಗಿ ಹೊಟೇಲ್ ನಲ್ಲಿರುವ ಸಭೆಗೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗ ಕಾಂಗ್ರೆಸ್ ನಾಯಕರ ಸಭೆ ನಡೆಸಲಾಗುತ್ತದೆ ಉಸ್ತುವಾರಿ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದೇವೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪ್ರಚಂಡ ಬಹುಮತದಿಂದ ಆರಿಸಿ ಬರುವ ವಿಶ್ವಾಸ ನಮಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಐಟಿ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಐಟಿ ದಾಳಿಯ ಬಗ್ಗೆ ಬಿಜೆಪಿಯವರನ್ನೇ ಕೇಳಬೇಕು ಎಂದು ವ್ಯಂಗ್ಯವಾಡಿದರು.
ಇನ್ನೂ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿರುವ ಕುರಿತು ಮಾತನಾಡಿದ ಅವರು, ಜೆಡಿಎಸ್ ನವರು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಶಕ್ತಿ ಇಲ್ಲದಿದ್ದರೂ ವೋಟ್ ಒಡೆಯಲು ಈ ತಂತ್ರವನ್ನು ರೂಪಿಸಿದ್ದಾರೆ ಎಂದು ಅವರು ಹೇಳಿದರು.
PublicNext
07/10/2021 05:51 pm