ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಿಜೆಪಿ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ: ಡಿ.ಕೆ.ಶಿವಕುಮಾರ್

ಹುಬ್ಬಳ್ಳಿ: ಹಾನಗಲ್ ಉಪ ಚುನಾವಣೆಯಲ್ಲಿ ಜನರು ಬದಲಾವಣೆ ಬಯಸಿದ್ದಾರೆ. ನಮ್ಮ ಅಭ್ಯರ್ಥಿ ನಿರಂತರವಾಗಿ ಕಳೆದ ಮೂರು ವರ್ಷದಿಂದ ಜನರ ಸಂಪರ್ಕದಲ್ಲಿದ್ದಾರೆ. ಕೋವಿಡ್ ಸಮಯದಲ್ಲಿ ನಮಗೆ ಏನೂ ಸಿಕ್ಕಿಲ್ಲ ಎಂದು ಜನರು ಬೆಸರಗೊಂಡಿದ್ದಾರೆ. ಇದರಿಂದ ಬಿಜೆಪಿಯ ವಿರುದ್ಧ ಜನರು‌ ಆಕ್ರೋಶಗೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದಲ್ಲಿಂದು ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸುವ ಪೂರ್ವದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜನರು ಬದಲಾವಣೆ ಮಾಡಲು ತೀರ್ಮಾನ ಮಾಡಿದ್ದಾರೆ. ಜನರ ಆಕ್ರೋಶ, ಜನರ ಧ್ವನಿ ಈ ಚುನಾವಣೆಯಲ್ಲಿ ಗೊತ್ತಾಗುತ್ತದೆ ಎಂದರು.

ಯಡಿಯೂರಪ್ಪನವರ ಆಪ್ತರೆಂದು ನಾನು ಸರ್ಟಿಫಿಕೇಟ್ ಕೊಡುವುದಿಲ್ಲ. ಇಡಿ ದಾಳಿ ಬಗ್ಗೆ ನನಗೆ ಎಲ್ಲವೂ ಗೊತ್ತಿದೆ. ಈ ಬಗ್ಗೆ ನಾನು ಈಗ ಏನು ಮಾತನಾಡುವುದಿಲ್ಲ. ಯಡಿಯೂರಪ್ಪನವರನ್ನು ಈಗಾಗಲೇ ಹೈಕಮಾಂಡ‌ ಹೇಗೆ ನಡೆಸಿಕೊಂಡು ಬಂದಿದೆ ಎಂದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಅವರು ಹೇಳಿದರು.

ಉಪಚುನಾವಣೆಯಲ್ಲಿ ಯಡಿಯೂರಪ್ಪನವರ ಮಗ ರಾಜ್ಯದ ಉಪಾಧ್ಯಕ್ಷರಿದ್ದರೂ ಯಾವುದೇ ಉಸ್ತುವಾರಿ ನೀಡಿರಲಿಲ್ಲ. ಕಾರ್ಯಕರ್ತರು ಪ್ರತಿಭಟನೆ ಮಾಡಿದ ನಂತರ ಅವರನ್ನು ಉಸ್ತುವಾರಿಯಲ್ಲಿ ಸೇರಿಸಿದ್ದಾರೆ, ಅದು ಅವರ ಪಕ್ಷದ ಆಂತರಿಕ ವಿಚಾರ ನಾನೂ ಏನೂ ಮಾತನಾಡುವುದಿಲ್ಲ ಎಂದು ವ್ಯಂಗ್ಯವಾಡಿದರು.

Edited By : Manjunath H D
PublicNext

PublicNext

07/10/2021 07:24 pm

Cinque Terre

59.26 K

Cinque Terre

13