ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ವರುಣ್ ಗಾಂಧಿಗೆ ಕೊಕ್

ದೆಹಲಿ: ಬಿಜೆಪಿ ಗುರುವಾರ 80 ಸದಸ್ಯರೊಂದಿಗೆ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ. ಇದರಲ್ಲಿ ಇಬ್ಬರು ಪ್ರಮುಖ ನಾಯಕರನ್ನು ಕೈಬಿಟ್ಟಿದೆ. ಈ ಕಾರ್ಯಕಾರಿ ಸಮಿತಿಯಲ್ಲಿ ಪಕ್ಷದ ಸಂಸದ ವರುಣ್ ಗಾಂಧಿ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಬೀರೇಂದ್ರ ಸಿಂಗ್ ಅವರನ್ನು ಕೈಬಿಟ್ಟಿದ್ದು ಇವರಿಬ್ಬರೂ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಟೀಕಿಸಿದವರಾಗಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಅವರನ್ನು ಒಳಗೊಂಡಂತೆ,ಪಕ್ಷದ ಹಿರಿಯರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಸದಸ್ಯರಾಗಿದ್ದಾರೆ.

179 ಜನ ಆಜೀವ ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ. 80 ಸದಸ್ಯರಲ್ಲಿ 37 ಮಂದಿ ಕೇಂದ್ರ ಸಚಿವರು ಮತ್ತು ರಾಜ್ಯದ ಹಲವಾರು ಸಚಿವರು ಸಮಿತಿಯ ಭಾಗವಾಗಿದ್ದಾರೆ. ಸಂಸದ ಡಿವಿ ಸದಾನಂದ ಗೌಡ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ, ಸಚಿವರಾದ ಆರ್, ಅಶೋಕ್, ಕೆಎಸ್. ಈಶ್ವರಪ್ಪ, ಜಗದೀಶ್ ಶೆಟ್ಟರ್, ನಳಿನ್ ಕುಮಾರ್ ಕಟೀಲ್, ಗೋವಿಂದ್ ಕಾರಜೋಳ, ಲಕ್ಷ್ಮಣ ಸವದಿ, ಅಶ್ವಥ್ ನಾರಾಯಣ, ಬಿಪಿ, ಅರುಣ್ ಕುಮಾರ್ ಗೆ ಸಮಿತಿಯಲ್ಲಿ ಸ್ಥಾನ ಸಿಕ್ಕಿದೆ.

ವರುಣ್ ಗಾಂಧಿಗೆ ಕೊಕ್: ಲಖೀಂಪುರ ಹಿಂಸಾಚಾರ ಪ್ರಕರಣವನ್ನು ಸಿಬಿಐ ತನಿಖೆ ಒತ್ತಾಯಿಸಿದ್ದಕ್ಕೆ ವರುಣ್ ಗಾಂಧಿ ಸ್ಥಾನ ಕಳೆದುಕೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ವರುಣ್ ಗಾಂಧಿ ಜತೆಗೆ ತಾಯಿ ಮನೇಕಾ ಗಾಂಧಿಗೂ ಸ್ಥಾನವಿಲ್ಲ. ಮುಂದಿನ ವರ್ಷ ನಡೆಯುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಪಕ್ಷ ಶಾಕ್ ನೀಡಿದೆ.

Edited By : Nagaraj Tulugeri
PublicNext

PublicNext

07/10/2021 09:08 pm

Cinque Terre

87.69 K

Cinque Terre

26

ಸಂಬಂಧಿತ ಸುದ್ದಿ