ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಾಲಿಬಾನ್ ಸಂಸ್ಕೃತಿ ಆರ್‌ಎಸ್‌ಎಸ್‌ನಲ್ಲಿ ಇಲ್ಲ, ಕಾಂಗ್ರೆಸ್‌ನಲ್ಲಿದೆ: ರೇಣುಕಾಚಾರ್ಯ ಕಿಡಿ

ಬೆಂಗಳೂರು: ಐಟಿ ದಾಳಿಗೂ ಯಡಿಯೂರಪ್ಪ ಅವರಿಗೂ ಸಂಬಂಧವಿಲ್ಲ.. ಸತ್ಯಾಂಶ ಹೊರಬರುತ್ತದೆ ಅಂತ ಅವರೇ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಬಗ್ಗೆ ಸಿದ್ದರಾಮಯ್ಯ, ಹೆಚ್. ಡಿ.ಕುಮಾರಸ್ವಾಮಿ ಹೇಳಿಕೆ ವಿರುದ್ಧ ಕಿಡಿಕಾರಿದರು. ಸಂಘ ಪರಿವಾರದ ವಿರುದ್ಧ ಟೀಕಿಸುವ ನೈತಿಕ ಹಕ್ಕು ಯಾರಿಗೂ ಇಲ್ಲ.. ಸಂಘ ಪರಿವಾರದ ನಾಯಕರಿಗೆ ಕುರ್ಚಿ ವ್ಯಾಮೋಹ ಇಲ್ಲ. ದೇಶಕ್ಕಾಗಿ ತ್ಯಾಗ ಮಾಡುವ ಸಂಸ್ಥೆ ಆರ್ ಎಸ್ ಎಸ್, ಕುರ್ಚಿ ವ್ಯಾಮೋಹ ಇರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ.. ಉಪಚುನಾವಣೆ ಬಂದಿರುವ ಹಿನ್ನೆಲೆಯಲ್ಲಿ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದರು. ಆರ್ ಎಸ್ ಎಸ್ ಬಗ್ಗೆ ಅನಗತ್ಯವಾಗಿ ಟೀಕೆ ಮಾಡುವುದು ಸರಿಯಲ್ಲ. ತಾಲಿಬಾನ್ ಸಂಸ್ಕೃತಿ ಆರ್ ಎಸ್ ಎಸ್ ನದ್ದಲ್ಲ, ಕಾಂಗ್ರೆಸ್ ನವರದ್ದು. ಕೊಳ್ಳಿಯಿಡುವ ಸಂಸ್ಕೃತಿ ,ವಿಕೃತ ಮನಸ್ಸಿನವರು ಕಾಂಗ್ರೆಸಿಗರು ಎಂದರು.

Edited By : Nagaraj Tulugeri
PublicNext

PublicNext

08/10/2021 05:15 pm

Cinque Terre

69.48 K

Cinque Terre

7

ಸಂಬಂಧಿತ ಸುದ್ದಿ