ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದರಾಮಯ್ಯ ಕುಲಗೆಟ್ಟ ರಾಜಕಾರಣ ಮಾಡ್ತಿದ್ದಾರೆ: ಕುಮಾರಸ್ವಾಮಿ ಕಿಡಿ

ಚನ್ನಪಟ್ಟಣ: ಮಾಜಿ ಸಿಎಂ ಸಿದ್ದರಾಮಯ್ಯ ಕುಲಗೆಟ್ಟ ರಾಜಕಾರಣ ಮಾಡ್ತಿದ್ದಾರೆ. ಅವರ ಮಟ್ಟಕ್ಕೆ ನಾನು ರಾಜಕೀಯ ಮಾಡೋದಿಲ್ಲ. ಅಲ್ಪಸಂಖ್ಯಾತರು ಗೆಲ್ಲುವ ಕಡೆ ಅಂದರೆ ಜೆಡಿಎಸ್‌ಗೆ ಮತ ಹಾಕಿ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಸೋಲಿಸಲು ಕಾಂಗ್ರೆಸ್ ನಾಯಕರು ಅಪಪ್ರಚಾರ ನಡೆಸುತ್ತಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲ್ಲಲಿದೆ ಎಂದು ಕುಮಾರಸ್ವಾಮಿ ವಿಶ್ವಾಸದಿಂದ ಹೇಳಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದ ನಾಯಕರಿಗೆ ಹೃದಯ ವೈಶಾಲ್ಯತೆ ಇಲ್ಲ. ಅದರ ಬದಲಿಗೆ ನಮ್ಮ ಪಕ್ಷವನ್ನೇ ಮುಗಿಸುವ ಕೆಟ್ಟ ರಾಜಕೀಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಜಾತ್ಯತೀತ ಶಕ್ತಿಗಳು ಉಳಿಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನ ಬೆಂಬಲಿಸಿ ಅಂತ ಹೇಳಿದ್ದೇನೆ. ಆದರೆ, ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿ ತಮ್ಮ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ನಾನು ಈ ಮುಂಚೆ ಆರ್‌ಎಸ್‌ಎಸ್‌ ಬಗ್ಗೆ ನೀಡಿದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

Edited By : Nagaraj Tulugeri
PublicNext

PublicNext

08/10/2021 06:01 pm

Cinque Terre

52.76 K

Cinque Terre

5

ಸಂಬಂಧಿತ ಸುದ್ದಿ