ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಿಖಿಂಪುರ ದುರಂತ: ನಾವು ಯಾರ ಪ್ರಭಾವಕ್ಕೂ ಒಳಗಾಗೋದಿಲ್ಲ ಎಂದ ಸಿಎಂ ಯೋಗಿ

ನವದೆಹಲಿ: ಲಖಿಂಪುರ್-ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನನ್ನು ಬಂಧಿಸುವಂತೆ ಪ್ರತಿಪಕ್ಷಗಳು ಆಗ್ರಹಿಸಿದ ಹಿನ್ನೆಲೆಯಲ್ಲಿ, ಯಾರಿಗೂ ಅನ್ಯಾಯವಾಗುವುದಿಲ್ಲ ಮತ್ತು ಯಾವುದೇ ಒತ್ತಡದಲ್ಲಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.

ಹಿಂಸೆಯಿಂದ ನಾಲ್ಕು ರೈತರು ಸೇರಿದಂತೆ ಎಂಟು ಜನರು ಮೃತಪಟ್ಟ ಘಟನೆಯನ್ನು ದುರದೃಷ್ಟಕರ ಎಂದು ವಿವರಿಸಿದ ಅವರು, ಸರ್ಕಾರವು ಘಟನೆಯ ವಿವರಗಳನ್ನು ಆಳವಾಗಿ ಪರಿಶೀಲಿಸುತ್ತಿದೆ ಎಂದು ಹೇಳಿದರು.”ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ, ಮತ್ತು ಕಾನೂನು ಪ್ರತಿಯೊಬ್ಬರಿಗೂ ಭದ್ರತೆ ನೀಡುವ ಭರವಸೆ ನೀಡಿದಾಗ, ಅವರು ಯಾರೇ ಆಗಿರಲಿ ಅದನ್ನು ಕೈಗೆ ತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದು ಮುಖ್ಯಮಂತ್ರಿ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

08/10/2021 07:44 pm

Cinque Terre

49.22 K

Cinque Terre

4