ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಲೆ ಏರಿಕೆಯಿಂದ ಹಬ್ಬದ ಸಂಭ್ರಮವೇ ಇಲ್ಲದಂತಾಗಿದೆ: ರಾಹುಲ್ ಗಾಂಧಿ

ನವದೆಹಲಿ: ನಿರಂತರ ಬೆಲೆ ಏರಿಕೆ ಹಾಗೂ ಹಣದುಬ್ಬರದಿಂದ ಹಬ್ಬದ ಸಂಭ್ರಮವೇ ಇಲ್ಲದಂತಾಗಿದೆ. ಇದಕ್ಕಾಗಿ ನಾವು ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಥ್ಯಾಂಕ್ಸ್ ಹೇಳಬೇಕಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ವ್ಯಂಗ್ಯವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಪೆಟ್ರೋಲ್-ಡೀಸೆಲ್, ಅಡುಗೆ ಅನಿಲ, ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗುತ್ತಲೇ ಇದೆ. ಕೆಳ‌ಮಧ್ಯಮ ವರ್ಗದ ಜನಕ್ಕೆ‌ ಕುಟುಂಬ ನಿರ್ವಹಣೆ ಹೊರೆಯಾಗಿದೆ. ಈ ನಡುವೆ ಹಬ್ಬದ ಉತ್ಸಾಹವೇ ಇಲ್ಲದಂತಾಗಿದೆ. ಕೇವಲ ಹನ್ನೊಂದು ದಿನಗಳಲ್ಲಿ ಪೆಟ್ರೋಲ್ ಬೆಲೆ 2.35 ಮತ್ತು ಡೀಸೆಲ್ ಬೆಲೆ 3 ರೂ ಗೆ ಹೆಚ್ಚಾಗಿದೆ. ಇದು ಸಾಮಾನ್ಯರ ಜೀವನ ಸ್ಥಿತಿಯನ್ನು ಮತ್ತಷ್ಟು ಕಠಿಣವಾಗಿಸಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

08/10/2021 09:03 pm

Cinque Terre

72.03 K

Cinque Terre

36

ಸಂಬಂಧಿತ ಸುದ್ದಿ