ಚನ್ನಪಟ್ಟಣ : ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿನ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಗಳು, ಕಾಶ್ಮೀರ ಪಂಡಿತರಲ್ಲಿ ಭೀತಿ ಮೂಡಿಸಿದೆ.
ಇದರ ಮಧ್ಯೆ ಕಾಶ್ಮೀರದಲ್ಲಿಯ ಕದನಕ್ಕೆ ಆರ್ ಎಸ್ ಎಸ್, ಬಿಜೆಪಿ ಕಾರಣ ಎಂದು ಹೆಚ್ ಡಿಕೆ ವಾಗ್ದಾಳಿ ನಡೆಸಿದ್ದಾರೆ. ಆರ್ ಎಸ್ ಎಸ್ ಮತ್ತು ಬಿಜೆಪಿ ಸೇರಿಕೊಂಡು ಕಾಶ್ಮೀರವನ್ನು ಹಾಳು ಮಾಡುತ್ತಿವೆ. 4 ದಿನಗಳಲ್ಲಿ ಕಾಶ್ಮೀರ ಪಂಡಿತರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಸರ್ಕಾರ ನಡೆಸೋದು ಹೇಗಂತ ಆರ್ ಎಸ್ ಎಸ್ ಹೇಳಿಕೊಟ್ಟಿರೋದು ಇದೇನಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.
ಆರ್ ಎಸ್ ಎಸ್ ಬಗ್ಗೆ ಈ ಹಿಂದೆ ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ಸಮರ್ಥಿಸಿಕೊಂಡಿರುವ ಅವರು ಅವರ ಅಜೆಂಡಾಗಳ ಬಗ್ಗೆ ಚರ್ಚೆ ನಡೆಸಲು ನಾನು ಸಿದ್ಧನಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರು ಚರ್ಚೆಗೆ ಬರಲಿ ಎಂದು ತಿಳಿಸಿದ್ದಾರೆ.
ಜೆಡಿಎಸ್ ವರಿಷ್ಠರಾದ ದೇವೇಗೌಡರು ದೇಶದ ಪ್ರಧಾನಿಯಾಗಿದ್ದ 20 ತಿಂಗಳ ಅವಧಿಯಲ್ಲಿ ದೇಶದಲ್ಲಿ ನಾಗರಿಕರ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿತ್ತಾ? ಸರ್ಕಾರ ನಡೆಸುವುದು ಹೇಗೆ ಎಂದು ನಿಮಗೆ ಆರ್ಎಸ್ಎಸ್ ಹೇಳಿಕೊಟ್ಟಿರುವುದು ಎಂದು ಪ್ರಶ್ನಿಸಿದರು.
ಚನ್ನಪಟ್ಟಣದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಶ್ಮೀರದ ಇಂದಿನ ಸಮಸ್ಯೆಗೆ ಬಿಜೆಪಿ ಮತ್ತು ಆರ್ ಎಸ್ ಎಸ್ ಕಾರಣ ಎಂದು ಆರೋಪಿಸಿದ್ದಾರೆ.
PublicNext
09/10/2021 11:26 am