ಬೆಂಗಳೂರು: ಕುಮಾರಸ್ವಾಮಿ ಹಾಗೂ ಬಿಜೆಪಿ ವಲಯದಲ್ಲಿ ಟ್ವಿಟ್ಟರ್ ವಾರ್ ಸದ್ಯಕ್ಕೆ ನಿಲ್ಲುವ ಹಾಗೇ ಕಾಣಲ್ಲ . ಆರ್‌ಎಸ್‌ಎಸ್ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕ ಸಿ.ಟಿ ರವಿ ಹರಿಹಾಯ್ದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಆನೆ ಇದ್ದ ಹಾಗೆ. ಆನೆ ತನ್ನ ದಾರಿಯಲ್ಲಿ ಸಾಗುತ್ತಿರುತ್ತದೆ. ನಡುವೆ ಮಾತನಾಡುವವರ ಬಗ್ಗೆ ಆನೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಕುಮಾರಸ್ವಾಮಿಯವರಿಗೆ ಟಾಂಗ್ ಕೊಟ್ಟಿದ್ದಾರೆ. ಆರ್‌ಎಸ್‌ಎಸ್ ಸಂಸ್ಕಾರ ಮಾಡುವ ಕೆಲಸ ಮಾಡುತ್ತಿದೆ. ಸುಮ್ಮನೆ ಬಾಯಿಗೆ ಬಂದ ಹಾಗೇ ಮಾತನಾಡೋದು ಸರಿಯಲ್ಲ ಎಂದಿದ್ದಾರೆ. ಯಡಿಯೂರಪ್ಪನವರು ಅಧಿಕಾರದಿಂದ ಕೆಳಗಿಳಿಯಲು ಆರ್‌ಎಸ್‌ಎಸ್ ಪ್ರಮುಖ ಕಾರಣ ಎಂದು ಎಚ್.ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಕುಮಾರಸ್ವಾಮಿ ಹೇಳಿಕೆಗೆ ಸಿ.ಟಿ ರವಿ ಈ ರೀತಿ ತಿರುಗೇಟು ನೀಡಿದ್ದಾರೆ.
PublicNext
10/10/2021 09:50 am